ಜಮ್ಮು-ಕಾಶ್ಮೀರ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೇರಿಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಯಿಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೇರಿದೆ. ನೂರಾರು ಮಂದಿ ಗಾಯಗೊಂಡಿದ್ದಾರೆ.

ಮಾತಾ ವೈಷ್ಣೋದೇವಿ ದೇಗುಲಕ್ಕೆ ಸಾಗುವ ಮಾರ್ಗದಲ್ಲಿ ಅರ್ಧ ಕುಮರಿಯ ಇಂದ್ರಪ್ರಸ್ತ ಭೋಜನಾಲಯ ಬಳಿ ನಿನ್ನೆ ಸಂಜೆ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಅವಶೇಷ ಗಳಡಿ ಇನ್ನೂ ಹಲವರು ಸಿಲುಕಿಕೊಂಡಿ ರುವ ಶಂಕೆ ಉಂಟಾಗಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಂದಾಗಿ ಜಮ್ಮು-ಕಾಶ್ಮೀರದ ಇತರ ಪ್ರದೇಶಗಳಲ್ಲೂ ಭಾರೀ ಹಾನಿ ಸಂಭವಿಸಿದೆ. ವಿದ್ಯುತ್ ಕಂಬಗಳು ಮತ್ತು ಮೊಬೈಲ್ ಟವರ್‌ಗಳು ಕುಸಿದು ಬಿದ್ದಿದ್ದು, ಇದರಿಂದಾಗಿ ದೂರ ಸಂಪರ್ಕ ಸೇವೆಗಳು ಸ್ಥಗಿತಗೊಂಡಿವೆ. ಜಮ್ಮು-ಕಾಶ್ಮೀರದ ಕಿಶ್ತ್ವಾರ್- ದೋಡ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ. ಅನೇಕ ಪರ್ವತ ರಸ್ತೆಗಳು ಭೂಕುಸಿತ ಮತ್ತು ಪ್ರವಾಹದಿಂದ ಹಾನಿಗೊಂಡಿದೆ. ನೂರಾರು ಯಾತ್ರಿಕರು ಗಾಯಗೊಂ ಡಿದ್ದು ಅವರನ್ನು ಖತ್ರಾ ಮತ್ತು ಜಮ್ಮುವಿನ ವಿವಿಧ ಆಸ್ಪತ್ರೆಗಳಲ್ಲಾಗಿ ದಾಖಲಿಸಲಾಗಿದೆ. ಜಿಲ್ಲಾಡಳಿತ, ಭಾರ ತೀಯ ಭೂಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಗಳನ್ನು ಭರದಿಂದ ನಿರ್ವಹಿಸುತ್ತಿದೆ. ೩೫೦೦ಕ್ಕೂ ಹೆಚ್ಚು ಮಂದಿಯನ್ನು ಇಲ್ಲಿಂದ ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ.

You cannot copy contents of this page