ಉಪ್ಪಳ : ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಮಂಜೇಶ್ವರ ಉಪಜಿಲ್ಲಾ ಸಮ್ಮೇಳನ ಹಾಗೂ ನಾಡಹಬ್ಬದ ಅಂಗವಾಗಿ ಕನ್ನಡ ಸಾಹಿತ್ಯ ರಸಪ್ರಶ್ನೆಯನ್ನು ಮುಳಿಂಜ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಕನ್ನಡ ಅಧ್ಯಾಪಕ ಸಂಘದ ಕೇಂದ್ರ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ಸತ್ಯನಾರಾಯಣ ಭಟ್ ದೈಗೋಳಿ ಉದ್ಘಾಟಿಸಿ ಮಾತನಾಡಿ, ‘ಮಕ್ಕಳಲ್ಲಿ ಸಾಹಿತ್ಯಾಭಿರುಚಿಯನ್ನು ಮೂಡಿಸಲು ಸಾಹಿತ್ಯ ರಸಪ್ರಶ್ನೆ ಕಾರ್ಯಕ್ರಮಗಳು ಪೂರಕವಾಗುತ್ತದೆ. ಇದರಿಂದಾಗಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿಗಳು ನೀಡಿದ ಕೊಡುಗೆಗಳು, ಕನ್ನಡ ಸಂಸ್ಕೃತಿಯನ್ನು ಮತ್ತೊಮ್ಮೆ ಮೆಲುಕು ಹಾಕಿದಂತಾಗುತ್ತದೆ’ ಎಂದು ತಿಳಿಸಿದರು. ಉಪಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕೊಡ್ಲಮೊಗರು ಅಧ್ಯಕ್ಷತೆ ವಹಿಸಿದ್ದÄ, ಮುಳಿಂಜ ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ, ಸಂಘಟನಾ ಕಾರ್ಯದರ್ಶಿ ಜಬ್ಬಾರ್ ಶುಭಹಾರೈಸಿದರು. ಕೇಂದ್ರ ಸಮಿತಿ ಉಪಾಧ್ಯಕ್ಷ ಉಮೇಶ್ ಬೆರಿಪದವು, ಉಪಜಿಲ್ಲಾ ಉಪಾಧ್ಯಕ್ಷೆ ಹರಿಣಾಕ್ಷಿ, ಕೋಶಾಧಿಕಾರಿ ಕಿಶೋರ್ ಕುಮಾರ್ ಉಪಸ್ಥಿತರಿದ್ದರು. ಉಪಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಸ್ವಾಗತಿಸಿ, ರಾಜೇಶ್ ಕಳಿಯೂರು ವಂದಿಸಿದರು. ಬಶೀರ್ ಮುಳಿಂಜ ನಿರೂಪಿಸಿದರು.






