ಮಂಜೇಶ್ವರ: ಕಾರು ಹಾಗೂ ಮೀನು ಸಾಗಾಟದ ಲಾರಿ ಢಿಕ್ಕಿ ಹೊಡೆದು ನಾಲ್ಕು ಮಂದಿ ಗಾಯಗೊಂಡ ಘಟನೆ ಮೇಲಿನ ತಲಪ್ಪಾಡಿಯಲ್ಲಿ ಸಂಭವಿಸಿದೆ. ಇಂದು ಮುಂಜಾನೆ 1 ಗಂಟೆಗೆ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆಯೆಂದು ಹೇಳಲಾಗುತ್ತಿದೆ. ಇವರನ್ನು ಮಂಗ ಳೂರಿನ ಆಸ್ಪತ್ರೆಯಲ್ಲಿ ದಾಖಲಿಸ ಲಾಗಿದೆ. ಗಾಯಗೊಂಡವರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಕಾಸರಗೋಡು ಭಾಗದಿಂದ ಮಂಗಳೂರು ಭಾಗಕ್ಕೆ ತೆರಳುತ್ತಿದ್ದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿ ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
