ಕಾಸರಗೋಡು: ರಾಜ್ಯದಲ್ಲಿ ಕಳೆದ ಎಡರಂಗ ಸರಕಾರ ಜ್ಯಾರಿಗೆ ತಂದ ಮಲಯಾಳ ಭಾಷಾ ಕಡ್ಡಾಯ ಮಸೂದೆಯಿಂದಾಗಿ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ಆಗಬಹುದಾದ ತೊಂದರೆಗಳ ಬಗ್ಗೆ ಹಾಗೂ ಆ ಮಸೂದೆಯಲ್ಲ್ಲಿರುವ ಕನ್ನಡ ವಿರೋಧಿ ಅಂಶಗಳ ಬಗ್ಗೆ ನೂತನ ಸರಕಾರಕ್ಕೆ ಮನವರಿಕೆ ಮಾಡಲು ಮನವಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಜಿಲ್ಲೆಗೆ ತಲುಪಿದ ರಾಜ್ಯ ಸ್ಥಳೀಯಾಡಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಾಜಿಯವರಿಗೆ ಕರ್ನಾಟಕ ಸಮಿತಿ ಮೂಲಕ ಈ ಮನವಿ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ ತಂಡದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ,ಕ.ಸಾ.ಪ ಗಡಿನಾಡ ಘಟಕ ಅಧ್ಯಕ್ಷ ಡಾ| ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕೇರಳ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ ಎ, ಕರ್ನಾಟಕ ಗಮಕ ಕಲಾ ಪರಿಷತ್ ಅಧ್ಯಕ್ಷ ತೆಕ್ಕೇಕರೆ ಶಂಕರನಾರಾಯಣ ಭಟ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ ಮೊದಲಾ ದವರು ಇದ್ದರು.







