ಹೊಸದುರ್ಗ: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಚೀಮೇನಿ ನೂರ್ಮಾಂಡಿ ಮದ್ಯ ಕಂಪೆನಿಯಲ್ಲಿ ನೌಕರನಾದ ಅಸ್ಸಾಂ ಗೋಲಾಗಟ್ ನಿವಾಸಿ ಬಿಪುಲ್ರಾಜ್ ಬೋನ್ಶಿ ತೆಂಗಾಲ್ (58) ಮೃತಪಟ್ಟ ವ್ಯಕ್ತಿ. ಮೊನ್ನೆ ಸಂಜೆ ಮದ್ಯ ಕಂಪೆನಿ ಸಮೀಪದಲ್ಲಿರುವ ಕೆರೆಯಲ್ಲಿ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೀಮೇನಿ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ದಿದ್ದಾರೆ. ಕಳೆದ ಮೂರು ವರ್ಷದಿಂದ ಈ ಕಂಪೆನಿಯಲ್ಲಿ ಇವರು ಕೆಲಸ ಮಾಡುತ್ತಿದ್ದರು. ನಿಡುಂಬಾ ನಿವಾಸಿ ಉಪೇಂದ್ರನ್ರ ದೂರಿನಂತೆ ಚೀಮೇನಿ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.





