ಪರಿಯಾರಂ  ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಶೌಚಾಲ ಯದಲ್ಲಿ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕ  ಲೋಕೋಪಯೋಗಿ ಬಂಗಲೆ ಸಮೀಪದ ತುಡಿಯಿಲ್ ವಿನೋದ್ (46) ಮೃತಪಟ್ಟ ವ್ಯಕ್ತಿ. ಇಂದು ಮುಂಜಾನೆ ಮೆಡಿಕಲ್ ಕಾಲೇಜು ಆಸ್ಪತ್ರೆಯ 803ನೇ ವಾರ್ಡ್‌ನ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಇವರು ಪತ್ತೆಯಾಗಿದ್ದರು. ಕೂಡಲೇ ಇವರನ್ನು ತುರ್ತು ನಿಗಾ ವಿಭಾಗಕ್ಕೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಕಿಡ್ನಿ ಸಂಬಂಧ ಅಸೌಖ್ಯದ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿನೋದ್‌ರನ್ನು ಪರಿಯಾರಂನ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಘಟನೆ ಬಗ್ಗೆ ಪರಿಯಾರಂ ಮೆಡಿಕಲ್ ಕಾಲೇಜು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನೋದ್ ಈ ಹಿಂದೆ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಂದೆ ಬಾಲಕೃಷ್ಣನ್, ಪತ್ನಿ ರೂಪಿಕ, ಇಬ್ಬರು ಮಕ್ಕಳು ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page