ಮಂಜೇಶ್ವರ: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಜತ್ತೂರು ಗೋಳಿಯಡಿ ನಿವಾಸಿ ಬಾಬು ಶೆಟ್ಟಿ (77) ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ನಿದ್ರಿಸಿದ್ದ ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹುಡುಕಾಡಿದಾಗ ಮನೆ ಸಮೀಪದ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದರು. ಕೂಡಲೇ ಮಂಗಲ್ಪಾಡಿಯ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ.
ಮೃತರು ಪತ್ನಿ ರತ್ನಾವತಿ, ಮಕ್ಕಳಾದ ದಿನೇಶ, ರಾಜೇಶ, ಅರುಂಧತಿ, ಅಳಿಯ ರಘುರಾಮ, ಸೊಸೆಯಂದಿರಾದ ವಿದ್ಯಾಲತ, ರಮ್ಯ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.





