ಉಪ್ಪಳ: ಜೋಡುಕಲ್ಲು ತಪೋವನ ಶ್ರೀ ಗಣೇಶ ಮಂದಿರ ಸಂರಕ್ಷಣೆಗಾಗಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಕಳೆದ 29 ದಿನಗಳಿಂದ ಹೋರಾಟ ನಡೆಯುತ್ತಿದ್ದು, ಭಜನೆ, ಯಾಗ, ನಾಮ ಜಪ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಮುಂದುವರಿಯುತ್ತಿದೆ. ಯತಿವರ್ಯರು ಹಾಗೂ ಹ¯ವಾರು ಧಾರ್ಮಿಕ ಮುಂಖAಡರು ಸ್ಥಳ ಸಂದರ್ಶಿಸಿ ಬೆಂಬಲವನ್ನು ನೀಡಿದ್ದಾರೆ. ನಿನ್ನೆ ಸಂಜೆ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಭೇಟಿ ನೀಡಿದರು. ಸಂರಕ್ಷಣಾ ಕ್ರಿಯಾ ಸಮಿತಿ ಪದಾಧಿಕಾರಿಗಳ ಸಹಿತ ನೂರಾರು ಮಂದಿ ಉಪಸ್ಥಿತರಿದ್ದರು.




