ಮಂಜೇಶ್ವರ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಕೊಲೆ ಬೆದರಿಕೆಯೊಡ್ಡಿದ ಬಿಜೆಪಿ ವಕ್ತಾರನ ವಿರುದ್ಧ ಕೇರಳ ಪೊಲೀಸರು ಕೇಸು ದಾಖಲಿಸದೆ ಪರೋಕ್ಷ ಬೆಂಬಲ ನೀಡಿದ್ದನ್ನು ಪ್ರತಿಭಟಿಸಿ ಕೆಪಿಸಿಸಿ ನಿರ್ದೇಶ ಪ್ರಕಾರ ಇಂದು ಸಂಜೆ 5 ಗಂಟೆಗೆ ಮಂಜೇಶ್ವರ ಬ್ಲೋಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಹೊಸಂಗಡಿ ಜಂಕ್ಷನ್‌ನಲ್ಲಿ ಪ್ರತಿಭಟನಾ ಸಂಗಮ ನಡೆಯಲಿದೆ. ಪಕ್ಷದ ಬ್ಲೋಕ್ , ಮಂಡಲ ಮಟ್ಟದ ಪದಾಧಿಕಾರಿಗಳು, ಬೂತ್, ವಾರ್ಡ್ ಅಧ್ಯಕ್ಷರು, ಪೋಷಕ ಸಂಘಟನೆಗಳ ಕಾರ್ಯಕರ್ತರು, ಜನಪ್ರತಿನಿಧಿಗಳು ಭಾಗವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಹಮ್ಮದ್ ಡಿಎಂಕೆ ತಿಳಿಸಿದ್ದಾರೆ.
