ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕ್  ಓಣಂ ಮಾರುಕಟ್ಟೆಗೆ ಚಾಲನೆ

ಮಂಜೇಶ್ವರ: ಕನ್ಸ್ಯೂಮರ್ ಫೆಡ್ ಹಾಗೂ ಮಂಜೇಶ್ವರ ಸಹಕಾರಿ ಬ್ಯಾಂಕಿನ ಸಂಯುಕ್ತಾಶ್ರಯದಲ್ಲಿ ಮಂಜೇಶ್ವರದ ಎಂ.ಕೆ. ಫಾತಿಮಾ ಕಾಂಪ್ಲೆಕ್ಸ್ನಲ್ಲಿ ಓಣಂ ಸಹಕಾರಿ ಮಾರುಕಟ್ಟೆಗೆ ಚಾಲನೆ ದೊರಕಿತು. ನಿನ್ನೆ ಬೆಳಿಗ್ಗೆ ಬ್ಯಾಂಕ್ ಅಧ್ಯಕ್ಷ ಎಸ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಬ್ಯಾಂಕ್‌ನ ಹಿರಿಯ ಗ್ರಾಹಕ ಹರೀಶ್ ಭಟ್‌ರಿಗೆ ಸಾಮಗ್ರಿ ವಿತರಿಸುವ ಮೂಲಕ ಮಂಜೇಶ್ವರ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಚಾಲನೆ ನೀಡಿದರು. ಬ್ಯಾಂಕ್ ಅಧ್ಯಕ್ಷ ಎಸ್. ರಾಮಚಂದ್ರ ಅವರು ಸಹಕಾರಿ ಸಂಸ್ಥೆಗಳು ಯಾವಾಗಲೂ ಗ್ರಾಹಕರ ಮತ್ತು ಸಮಾಜದ ಹಿತಾಸಕ್ತಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತವೆ. ಹಬ್ಬದ ದಿನಗಳಲ್ಲಿ ಗ್ರಾಹಕರಿಗೆ ಆರ್ಥಿಕ ನೆರವು ಹಾಗೂ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ವಸ್ತುಗಳನ್ನು ಒದಗಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ನುಡಿದರು. ಬ್ಯಾಂಕ್ ನಿರ್ದೇಶಕರಾದ ಸೇಸಮ್ಮ, ಗಣೇಶ್ ಸಿ.ಎಚ್., ಯತೀಶ ಕಾಜೂರು, ಡಾ. ಕೆ.ಎ. ಖಾದರ್, ರೇಖಾ ಕೀರ್ತೇಶ್ವರ, ನಾರಾಯಣಿ ರಾಜನ್, ವಿಜಯ ಕನಿಲ, ಗಂಗಾಧರ ಕೆ.ಎಚ್., ಶ್ರೀಧರ ಹಾಗೂ ಎಂ.ಕೆ. ಮಸೂದ್ ಸೇರಿ ದಂತೆ ಹಲವರು ಉಪಸ್ಥಿತರಿದ್ದರು. ಬ್ಯಾಂಕ್ ಕಾರ್ಯದರ್ಶಿ ರಾಜನ್ ನಾಯರ್ ಪಿ. ಸ್ವಾಗತಿಸಿ, ರಾಮಚಂದ್ರ ಕೆ. ವಂದಿಸಿದರು.

RELATED NEWS

You cannot copy contents of this page