ಉಪ್ಪಳ: ಶಿರಿಯ ಬಳಿ ಬೇರಿಕೆ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 7.30ರ ವೇಳೆ ಮೃತದೇಹ ಕಂಡು ಬಂದಿದೆ. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಕರಾವಳಿ ಪೊಲೀಸರು ತಲುಪಿ ಪರಿಶೀಲನೆ ನಡೆಸಿದರು. ಇದು ಗಂಡಸಿನ ಮೃತದೇಹವೆಂದು ಖಚಿತಗೊಂಡಿದ್ದು, ಸುಮಾರು 50 ವರ್ಷ ಪ್ರಾಯ ಅಂದಾಜಿಸಲಾಗಿದೆ. ಮೃತದೇಹದಲ್ಲಿ ಕೆಂಪು ಬಣ್ಣದ ಅಂಗಿಯಿದೆ.
ಸಾವಿಗೀಡಾಗಿ ಐದು ದಿನಗಳಾಗಿರಬಹುದೆಂದು ಅಂದಾಜಿಸಲಾಗಿದೆ. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಗೆ ತಲುಪಿಸಲಾಗಿದೆ. ಮೃತವ್ಯಕ್ತಿ ಯಾರೆಂದು ತಿಳಿಯಲು ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಎಲ್ಲಾ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.