ಕಾಸರಗೋಡು: ಮಾದಕ ದ್ರವ್ಯವಾದ ಎಂಡಿಎಂಎ ಕೈವಶವಿರಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾ ಧೀಶರಾದ ವಿನಾಯಕ ರಾವ್ ಆರ್ ಅವರು ಮೂರು ವರ್ಷ ಕಠಿಣ ಸಜೆ ಹಾಗೂ 25,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ಚೆರ್ಕಳ ಮುಟ್ಟತ್ತೋಡಿಯ ಅಪಾರ್ಟ್ಮೆಂಟ್ವೊಂದಲ್ಲಿ ವಾಸಿಸುತ್ತಿರುವ ಅಬ್ದುಲ್ ಸಿ (41) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
೨೦೨೦ ಸೆಪ್ಟಂಬರ್ ೨೬ರಂದು ರಾತ್ರಿ ಚೆರ್ಕಳದಲ್ಲಿ ಅಂದು ವಿದ್ಯಾನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿದ್ದ ವಿಷ್ಣು ಪ್ರಸಾದ್ರ ನೇತೃತ್ವದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯೂ ೪ ಗ್ರಾಂ ಎಂಡಿಎಂಎ ಸಹಿತ ಬಂಧಿತ ಪ್ರಕರಣ ದಾಖಲಿಸಿ ಕೊಂಡಿದ್ದರು. ನಂತರ ಎಸ್ಐ ವಿಜಯನ್ ವಿ.ಕೆ ಈ ಪ್ರಕರಣದ ಮುಂದಿನ ತನಿಖೆ ನಡೆಸಿ ನ್ಯಾಯಾಲ ಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಶನ್ ಪರ ಜಿಲ್ಲಾ ಪಬ್ಲಿಕ್ ಪ್ರೋಸಿಕ್ಯೂಟರ್ ವೇಣುಗೋಪಾಲ್ ಪಿ ನ್ಯಾಯಾಲಯದಲ್ಲಿ ವಾದಿಸಿದ್ದರು.






