ಮಂಜೇಶ್ವರ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯವನ್ನು ಅಬಕಾರಿ ತಂಡ ವಶಪಡಿಸಿ ಓರ್ವನನ್ನು ಬಂಧಿಸಿದೆ.
ಮೊಗ್ರಾಲ್ ನೀರೋಳ್ ನಿವಾಸಿ ಬಿ. ಶಿವಪ್ರಸಾದ್ (26) ಎಂಬಾತ ಬಂಧಿತ ವ್ಯಕ್ತಿ. ಈತನ ಬ್ಯಾಗ್‌ನಿಂದ 9 ಲೀಟರ್ ಕರ್ನಾಟಕ ಮದ್ಯ ವಶಪಡಿಸಲಾಗಿದೆ. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ನಿನ್ನೆ ಮಧ್ಯಾಹ್ನ 12 ಗಂಟೆಗೆ ಅಬಕಾರಿ ತಂಡ ಬಸ್‌ನಲ್ಲಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್ ಜಿನು ಜೇಮ್ಸ್ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ಎಂ.ವಿ. ಜಿಜಿನ್, ಗ್ರೇಡ್ ಪ್ರಿವೆಂಟೀವ್ ಆಫೀಸರ್ ಪಿ.ಕೆ. ಬಾಬು ರಾಜ್, ಸಿವಿಲ್ ಎಕ್ಸೈಸ್ ಆಫೀಸರ್ ಸುನೀಲ್ ಎಂಬಿವರು ಕಾರ್ಯಾಚರಣೆ ನಡೆಸಿದ ತಂಡದಲ್ಲಿದ್ದರು.