ಕಾಸರಗೋಡು: ‘ಅಂತ್ಯೋದಯ’ ಎಂಬ ಆಶಯದ ಸಾಕಾರತೆಯ ಮೂಲಕ 140 ಕೋಟಿ ಜನರ ಕಲ್ಯಾಣ ಹಾಗೂ ದೇಶದ ಸಮಗ್ರ ಅಭಿವೃದ್ಧಿ ಗಾಗಿ ಶ್ರಮಿಸುತ್ತಿರುವ ಆಡಳಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರದ್ದು ಎಂಬುದನ್ನು ಜಗತ್ತು ಇಂದು ಒಪ್ಪಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಸಿ.ಕೆ. ಪದ್ಮನಾಭನ್ ಹೇಳಿದರು.
ನರೇಂದ್ರ ಮೋದಿಯವರು ಆಡಳಿತಗಾರರಾಗಿ 25 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಾಸರಗೋಡು ಮುನ್ಸಿಪಲ್ ಟೌನ್ ಹಾಲïನಲ್ಲಿ ಇಂದು ಬೆಳಿಗ್ಗೆ ಜರಗಿದ ‘ವಿಕಸಿತ ಭಾರತ ಸಂಕಲ್ಪ ಸಭೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವಂದೇ ಮಾತರಂ ಪೂರ್ಣ ಪ್ರಮಾಣದಲ್ಲಿ ಹಾಡಬೇಕೆಂಬ ನಿರ್ದೇಶÀ ನೀಡುವ ಮೂಲಕ ರಾಷ್ಟ್ರೀಯ ಭಾವೈಕ್ಯತೆ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶವನ್ನು ನರೇಂದ್ರ ಮೋದಿ ಸರಕಾರ ಎತ್ತಿಹಿಡಿದಿದೆ ಎಂದು ಅವರು ಹೇಳಿದರು. ವಂದೇ ಮಾತರಂ ಹಾಡುತ್ತಾ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಮ್ಮ ಹಿರಿಯರಿಗೆ ಕೃತಜ್ಞತೆ ಮತ್ತು ಗೌರವ ಸಲ್ಲಿಸಬೇಕಾದ ಅಗತ್ಯವಿದೆ ಎಂದು ಸಿ.ಕೆ. ಪದ್ಮನಾಭನ್ ತಿಳಿಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸತೀಶ್ ಚಂದ್ರ ಭಂಡಾರಿ, ಸವಿತಾ, ಎ. ವೇಲಾಯುಧನ್, ಕಣ್ಣೂರು ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಮನುಲಾಲ್ ಮೇಲತ್, ಜಿಲ್ಲಾ ಉಪಾಧ್ಯಕ್ಷ ಹಾಗೂ ಸೇವಾ ಜ್ಯೋತಿ ಯಾತ್ರೆಯ ಜಿಲ್ಲಾ ಪ್ರಭಾರಿ ಪಿ. ರಮೇಶ್ ಉಪಸ್ಥಿತರಿದ್ದರು.
ತದನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ನೇರ ಪ್ರಸಾರವನ್ನು ಪ್ರದರ್ಶಿಸಲಾಯಿತು. ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇವಾ ಜ್ಯೋತಿಯನ್ನು ಬೆಳಗಿಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿಯವರ ನೇತೃತ್ವದಲ್ಲಿ ಆರಂಭಗೊAಡ ಸೇವಾ ಜ್ಯೋತಿ ಯಾತ್ರೆಯು ಚಂದ್ರಗಿರಿ ಜಂಕ್ಷನ್, ಹೊಸ ಬಸ್ ನಿಲ್ದಾಣ ಮಾರ್ಗವಾಗಿ ತಾಳಿಪಡುಪು ಮೈದಾನದಲ್ಲಿ ಮುಕ್ತಾಯಗೊಂಡಿತು. ಜಿಲ್ಲೆಯ 10 ಮಂಡಲ ಗಳಿಂದ ಸುಮಾರು 500ಕ್ಕೂ ಹೆಚ್ಚು ಬೂತïಗಳ ಕಾರ್ಯಕರ್ತರು ದ್ವಿಚಕ್ರ ವಾಹನಗಳೊಂದಿಗೆ ಬೆಳಿಗ್ಗೆ ಮುನ್ಸಿಪಲ್ ಟೌನ್ ಹಾಲïಗೆ ಆಗಮಿಸಿದ್ದರು.






