ಉಪ್ಪಳ: ಮಂಗಲ್ಪಾಡಿ ಪಂಚಾ ಯತ್ ಸೋಂಕಾಲು ಪ್ರತಾಪನಗರ ದಿಂದ 13 ವರ್ಷದ ಕೃಪೇಶ್ ನಾಪತ್ತೆಯಾದ ಪ್ರಕರಣದ ತನಿಖೆ ತೀವ್ರಗೊಳಿಸಬೇಕೆಂದು ಒಬಿಸಿ ಮೋರ್ಛಾ ಆಗ್ರಹಿಸಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ 12 ದಿನಗಳು ಕಳೆದರೂ ಪೊಲೀಸರಿಗೆ ಯಾವುದೇ ಮಾಹಿತಿ ಲಭಿಸಿಲ್ಲ. ತನಿಖೆ ನಿಧಾನವಾಗಿ ನಡೆಯುತ್ತಿದೆಯೆಂದು ಬಿಜೆಪಿ ಒಬಿಸಿ ಮೋರ್ಛಾ ಜಿಲ್ಲಾಧ್ಯಕ್ಷ ಕೆ.ಪಿ. ವಲ್ಸರಾಜ್ ಆರೋಪಿಸಿದ್ದಾರೆ. ಕೃಪೇಶ್ ಅವರ ತಂದೆ, ತಾಯಿ ಮತ್ತು ಸಹೋದರರು ಸಂಕಷ್ಟದಲ್ಲಿದ್ದಾರೆ. ಆದಷ್ಟು ಶೀಘ್ರ ಕೃಪೇಶ್‌ರನ್ನು ಹುಡುಕಲು ವ್ಯವಸ್ಥೆ ಮಾಡಬೇಕು ಮತ್ತು ತನಿಖೆಯನ್ನು ತೀವ್ರಗೊಳಿಸಬೇಕು. ಇಲ್ಲದಿದ್ದರೆ ಬಿಜೆಪಿ ಪೊಲೀಸ್ ಠಾಣೆಗೆ ಪ್ರತಿಭಟನೆ ಮೆರವಣಿಗೆ ನಡೆಸಬೇಕಾಗುತ್ತದೆ ಎಂದು ವಲ್ಸರಾಜ್ ತಿಳಿಸಿದ್ದಾರೆ. ಪೊಲೀಸರ ಈ ನಿರ್ಲಕ್ಷ್ಯದ ವಿರುದ್ಧ ಮುಖ್ಯಮಂತ್ರಿ ಮತ್ತು ಡಿಜಿಪಿಗೆ ದೂರು ನೀಡುವುದಾಗಿ ಅವರು ಹೇಳಿದರು.
