ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಓಣಂ ಆಚರಣೆ

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕಾಸರಗೋಡು ಸೇವಾ ಸಹಕಾರಿ ಬ್ಯಾಂಕ್‌ನ ಸಭಾಂಗಣದಲ್ಲಿ ಓಣಂ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಯಿತು. ಶಾಸಕ ಎನ್.ಎ. ನೆಲ್ಲಿಕುನ್ನು ಕಾರ್ಯಕ್ರಮ ಉದ್ಘಾಟಿಸಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಶಿವಾನಂದ ಕೋಟಿಯಾನ್ ಕಟಪಾಡಿ ಬರೆದ ಗುರುದರ್ಶನ ಕೃತಿನ್ನು ಇದೇ ಸಂದರ್ಭದಲ್ಲಿ ಶಾಸಕರು ಪ್ರದರ್ಶನಗೈದರು. ಹಿರಿಯ ಪೊಲೀಸ್ ಅಧಿಕಾರಿ ಡಾ. ವಿ. ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರವಿ ನಾಯ್ಕಾಪು ಕ್ಷೇಮಾಭಿವೃದ್ಧಿ ಸಂಘದಕಾರ್ಯದರ್ಶಿ ಗಂಗಾಧರ ತೆಕ್ಕೇಮೂಲೆ,  ಅಖಿಲೇಶ್ ನಗುಮುಗಂ ಸೇರಿದಂತೆ ಹಲವರು ಮಾತನಾಡಿದರು. ಬಳಿಕ ಓಣಂ ಔತಣ ಕೂಟವನ್ನು ಏರ್ಪಡಿಸಲಾಯಿತು.

RELATED NEWS

You cannot copy contents of this page