ಮಂಜೇಶ್ವರ: ಬೈಕ್‌ನಲ್ಲಿ ಸಾಗಿಸುತ್ತಿದ್ದ 26.81 ಗ್ರಾಂ ಮಾದಕದ್ರವ್ಯವಾದ ಎಂಡಿಎಂಎಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಎಸ್‌ಐ ವೈಷ್ಣವ್ ನೇತೃತ್ವದ ಪೊಲೀಸರು ಇಂದು ಮುಂಜಾನೆ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ಬಂಗ್ರಮಂಜೇಶ್ವರ ನಸೀರಿಯ ಮಂಜಿಲ್‌ನ ಅಬೂಬ ಕರ್ ಆಬೀದ್ (25) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬೈಕನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಇಂದು ಮುಂಜಾನೆ 1.45ರ ವೇಳೆಗೆ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿ ಓವರ್ ಬ್ರಿಡ್ಜ್ ರಸ್ತೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಎಸ್‌ಐ ನೇತೃತ್ವದಲ್ಲಿ ಪೊಲೀಸರು ರಾತ್ರಿ ವೇಳೆ ನಡೆಸಿದ ವಾಹನ ತಪಾಸಣೆಯಲ್ಲಿ ಈ ಮಾಲು ಪತ್ತೆಹಚ್ಚಲಾಗಿದೆ. ಬಂಧಿತನ ಪ್ಯಾಂಟ್ ಜೇಬಿನಲ್ಲಿ ಈ ಮಾಲು ಪತ್ತೆಯಾಗಿದೆಯೆಂದು, ಬಂಧಿತನು ಇತರ ಹಲವು ಪ್ರಕಣಗಳಲ್ಲೂ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.







