ಮಾದಕದ್ರವ್ಯ ಪ್ರಕರಣ ಆರೋಪಿಗೆ ಒಂದು ವರ್ಷ ಸಜೆ, ಜುಲ್ಮಾನೆ

ಕಾಸರಗೋಡು: ಮಾದಕ ದ್ರವ್ಯಗಳೊಂದಿಗೆ  ಬಂಧಿತನಾದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ರಾಮು ರಮೇಶ್‌ಚಂದ್ರ ಭಾನು ಅವರು ಒಂದು ವರ್ಷ ಕಠಿಣ ಸಜೆ ಹಾಗೂ 20,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.  ಮಧೂರು ಚೆಟ್ಟುಂಗುಳಿ ಹಿದಾಯತ್ ನಗರ ನಿವಾಸಿ ಅಬ್ದುಲ್ ರಹ್ಮಾನ್ (೩೯) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಎರಡು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇ ಕಾಗಿದೆ ಎಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

೨೦೨೧ ಸೆಪ್ಟಂಬರ್ ೧೫ರಂದು ಮಧೂರು ಚೆಟ್ಟುಂಗುಳಿಯಲ್ಲಿ ಅಂದು ವಿದ್ಯಾನಗರ ಪೊಲೀಸ್ ಠಾಣೆ ಎಸ್‌ಐ ಆಗಿದ್ದ ಶೇಖ್ ಅಬ್ದುಲ್ ರಜಾಕ್‌ರ ನೇತೃತ್ವದ ಪೊಲೀಸರ ತಂಡ ನಡೆಸಿದ ಕಾರ್ಯಾಚರಣೆ ಯಲ್ಲಿ ಮಾದಕದ್ರವ್ಯ ವಾದ 34.15 ಗ್ರಾಂ ಚರಸ್ ಮತ್ತು 02.31 ಗ್ರಾಂ ಎಂಡಿಎಂಎ ಸಹಿತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಎಸ್‌ಐ ಶೇಖ್ ಅಬ್ದುಲ್ ರಜಾಕ್ ರವರೇ ಈ ಪ್ರಕರಣದ ಮುಂದಿನ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಆರೋಪಿಗೆ ಈ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಷನ್ ಪರ ಹೆಚ್ಚುವರಿ ಸರಕಾರಿ ಪ್ಲೀಡರ್ ಜಿ. ಮೋಹನನ್ ಮತ್ತು ನ್ಯಾಯವಾದಿ ಚಿತ್ರಕಲಾ ನ್ಯಾಯಾಲಯದಲ್ಲಿ ವಾದಿಸಿದ್ದರು.

RELATED NEWS

You cannot copy contents of this page