ಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಮುಳಿಯ ಶ್ಯಾಮ್ ಭಟ್ (81) ನಿನ್ನೆ ರಾತ್ರಿ ನಿಧನ ಹೊಂದಿದರು. ಪುತ್ತೂರಿನ ಪಾಂಗ್ಲಾಯಿಯಲ್ಲಿರುವ ಸ್ವಗೃಹದಲ್ಲಿ ಅಲ್ಪ ಕಾಲದಿಂದ ಚಿಕಿತ್ಸೆಯಲ್ಲಿದ್ದರು. ಪುತ್ತೂರು, ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಮುಳಿಯ ಚಿನ್ನಾಭರಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದರು. ಮೃತರು ಮಕ್ಕಳಾದ ಕೇಶವ ಪ್ರಸಾದ್ ಮುಳಿಯ, ಕೃಷ್ಣ ನಾರಾಯಣ ಮುಳಿಯ, ವಿದ್ಯಾಸರಸ್ವತಿ, ಅಳಿಯ ಶ್ಯಾಮಸುಂದರ್, ಸೊಸೆಯಂದಿರಾದ ಕೃಷ್ಣವೇಣಿ ಪ್ರಸಾದ್, ಅಶ್ವಿನಿ ಕೃಷ್ಣ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.






