ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿಣರಾಯಿ ವಿಜಯನ್

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್ ರಾಜ್ಯಪಾಲ  ರಾಜೇಂದ್ರ ಅರ್ಲೇಕರ್‌ರಿಗೆ ಕಳುಹಿಸಿಕೊಟ್ಟಿದ್ದು ಅದನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಮಾತ್ರವಲ್ಲ  ನೂತನ ಸರಕಾರ ರಚನೆಯಾಗುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ  ಪಿಣರಾಯಿ ವಿಜಯನ್‌ರಿಗೆ ರಾಜ್ಯಪಾಲರು ನಿರ್ದೇಶ ನೀಡಿದ್ದಾರೆ.

You cannot copy contents of this page