ಛಾಯಗ್ರಾಹಕ ಶ್ರೀಕಾಂತ್ ಕಾಸರಗೋಡುರಿಗೆ ಪ್ರಶಸ್ತಿ ಪ್ರದಾನ

ಕಾಸರಗೋಡು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಛಾಯಗ್ರಾಹಕ ಶ್ರೀಕಾಂತ್ ಕಾಸರಗೋಡು ಅವರಿಗೆ ನೀಡಲಾಯಿತು. ಕುಡಾಲುಮೇರ್ಕಳ ಸುಬ್ಬಯ್ಯಕಟ್ಟೆ ಅನುದಾನಿತ ಶಾಲೆಯಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ, ಕನ್ನಡ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಟಿ.ಎಂ. ಶಹೀದ್ ಪ್ರಶಸ್ತಿ ಪ್ರದಾನ ಮಾಡಿದರು. ಎ.ಆರ್. ಸುಬ್ಬಯ್ಯಕಟ್ಟೆ, ರವಿ ನಾಯ್ಕಾಪು, ಸೋಮಶೇಖರ ಜೆ.ಎಸ್., ಪ್ರದೀಪ್ ಕುಮಾರ್ ಕಲ್ಕೂರ, ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ರಾಧಾಕೃಷ್ಣ ಉಳಿಯತ್ತಡ್ಕ ಉಪಸ್ಥಿತರಿದ್ದರು. ಶ್ರೀಕಾಂತ್ ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಂಚಾಲಕ, ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಈಸ್ಟ್ ಘಟಕದ ಕೋಶಾಧಿಕಾರಿಯಾಗಿದ್ದಾರೆ. 

You cannot copy contents of this page