ಬದಿಯಡ್ಕ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ಅಗ್ನಿ ಫ್ರೆಂಡ್ಸ್ ಬದಿಯಡ್ಕ ಇವರ ನೇತೃತ್ವದಲ್ಲಿ ಬದಿಯಡ್ಕ ಮೂಕಂಪಾರೆಯ ಹಿಂದೂ ರುದ್ರ ಭೂಮಿಯನ್ನು ಸ್ವಚ್ಛಗೊಳಿಸಲಾಯಿತು. ಕಾಡು ಪೊದೆಗಳನ್ನು ತೆರವುಗೊಳಿಸಿದ ಕಾರ್ಯಕರ್ತರು ಪ್ಲಾಸ್ಟಿಕ್ ಹಾಗೂ ಇನ್ನಿತರ ವಸ್ತುಗಳನ್ನು ಸಂಗ್ರಹಿಸಿದರು. ಅಗ್ನಿ ಫ್ರೆಂಡ್ಸ್ನ ಅಧ್ಯಕ್ಷ ರತೀಶ್, ಅನಿಲ್ ಕುಮಾರ್, ಅವಿನಾಶ್ ರೈ, ಭರತ್, ರಾಜೇಶ್ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
