ಕಾಸರಗೋಡು: ಕಲ್ಯೋಟ್ ಅವಳಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಪರೋಲ್ ಮಂಜೂರು ಮಾಡಿರುವು ದನ್ನು ಪ್ರತಿಭಟಿಸಿ ಅನುಮತಿರಹಿತ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಸಹಿತ 83 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಯುಡಿಎಫ್ ಜಿಲ್ಲಾ ಸಂಚಾಲಕ ಎ. ಗೋವಿಂದನ್ ನಾಯರ್ ಸಹಿತ ಹಲವರ ವಿರುದ್ಧ ಇನ್ಸ್‌ಪೆಕ್ಟರ್ ಎಂ.ವಿ. ಶ್ರೀದಾಸ್‌ರ ದೂರಿನಂತೆ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ.
