ಕಾಸರಗೋಡು: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮದ ಭಾಗವಾಗಿ ಐದು ವರ್ಷ ವಯಸ್ಸಿನವರೆಗಿನ ಎಲ್ಲಾ ಮಕ್ಕಳಿಗೆ
ಸುಸಜ್ಜಿತ ಬೂತ್‌ಗಳ ಮೂಲಕ ಔಷಧ ವಿತರಿಸಲಾಗುವುದು. ಜಿಲ್ಲೆಯಲ್ಲಿ ಒಂದು ಲಕ್ಷ ಮಕ್ಕಳಿಗೆ ಬಿಂದು ಔಷಧಿ ನೀಡಲಾಗುವುದು. ಇದಕ್ಕಾಗಿ 1200 ಬೂತ್‌ಗಳನ್ನು ಸ್ಥಾಪಿಸಲಾಗುವುದು. 12 ರಂದು ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ರಾಜ್ಯದಾದ್ಯಂತ ಶಾಲೆಗಳು, ಅಂಗನವಾಡಿಗಳು, ಗ್ರಂಥಾಲಯಗಳು ಮತ್ತು ಸಂಸ್ಥೆಗಳಲ್ಲಿ ಬೂತ್‌ಗಳು ಕಾರ್ಯನಿರ್ವಹಿಸಲಿವೆ. 13 ಮತ್ತು 14 ರಂದು ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಅನ್ಯ ರಾಜ್ಯ ಕಾರ್ಮಿಕರ ಕೇಂದ್ರಗಳು, ಪ್ರವಾಸಿ ಕೇಂದ್ರಗಳಲ್ಲಿ ಮೊಬೈಲ್ ಬೂತ್‌ಗಳು ಕಾರ್ಯನಿರ್ವಹಿಸಲಿವೆ. 12ರಂದು ಔಷಧಿ ಪಡೆದುಕೊಳ್ಳಲು ಸಾಧ್ಯವಾಗದ ಮಕ್ಕಳಿಗೆ 13 ಮತ್ತು 14 ರಂದು ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಔಷಧಿ ಒದಗಿಸಲಿದ್ದಾರೆ.
ಕಾರ್ಯಕ್ರಮದ ಭಾಗವಾಗಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಂತರಸAಪರ್ಕ ಸಭೆಯನ್ನು ಕಲೆಕ್ಟರೇಟ್ ಸಮ್ಮೇಳನ ಸಭಾಂಗಣದಲ್ಲಿ ನಡೆಸಲಾಯಿತು. ಎಡಿಎಂ ಪಿ. ಅಖಿಲ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಡಾ.ಬಿ. ಸಂತೋಷ್ ಮಾಹಿತಿ ನೀಡಿದರು. ಡೆಪ್ಯೂಟಿ ಡಿಎಂಒ ಡಾ. ಶಾಂತಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
