ತಿರುವನಂತಪುರ: ಅತಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ಕಾಸರಗೋಡು, ಕಣ್ಣೂರು, ವಯನಾಡು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ಅತಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಎರ್ನಾಕುಲಂ, ಇಡುಕ್ಕಿ, ತ್ರಿಶೂರು, ಪಾಲಕ್ಕಾಡ್, ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜತೆ ಭಾರೀ ಬಿರುಗಾಳಿ, ಸಿಡಿಲು, ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇಂದು ಕೇರಳ, ಕರ್ನಾಟಕ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ
