ಕುಲಾಲಸಂಘದಿಂದ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಳ: ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಂಜೇಶ್ವರ, ತೂಮಿನಾಡು ಇದರ ನೇತೃತ್ವದಲ್ಲಿ, ಶ್ರೀ ಮಹಾಕಾಳಿ ಭಜನಾ ಮಂದಿರ ತೂಮಿನಾಡು, ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಕುಂಜತ್ತೂರು ಪದವು, ಶ್ರೀ ಶಿವಶಕ್ತಿ ಸೀತಾರಾಮ ಭಜನಾಮಂದಿರ ಕುಂಜತ್ತೂರು, ಕುಲಾಲ ಪಂಚಾಯತ್ ಶಾಖೆಗಳ ಸಹಕಾರದಲ್ಲಿ ಮತ್ತು ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆಯ ಸಹಯೋಗದಲ್ಲಿ ಡಿಸೆಂಬರ್ 7 ರಂದು ತೂಮಿನಾಡಿನ ಲ್ಲಿರುವ ಜಿಲ್ಲಾ ಕುಲಾಲ ಸಂಘದ ಸಮುದಾಯದ ಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಅರೋಗ್ಯ ತಪಾಸಣಾ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ ಜಿಲ್ಲಾ ಸಂಘದ ಪ್ರಧಾನ ಕಚೇರಿಯಲ್ಲಿ ಜರಗಿತು. ಜಿಲ್ಲಾ ಕುಲಾಲ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಂಘ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

You cannot copy contents of this page