ಕಾಸರಗೋಡು: ಪಾರಕಟ್ಟೆಯಲ್ಲಿ ವಾಸಿಸುತ್ತಿದ್ದ ನಿವೃತ್ತ ಎಸ್.ಐ ಧನ್‌ರಾಜ್ (65) ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇವರನ್ನು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಧನ್‌ರಾಜ್ ಹಲವು ಪ್ರಕರಣಗಳನ್ನು ಬೆಳಕಿಗೆ ತರುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಕಾಸರಗೋಡು ಕ್ರೈಂ ಬ್ರಾಂಚ್ ಯೂನಿಟ್‌ನಿಂದ ನಿವೃತ್ತಿ ಹೊಂದಿದ ಬಳಿಕ ಚೆರ್ಕಳದ ಖಾಸಗಿ ಆಸ್ಪತ್ರೆಯೊಂದರ ಸೆಕ್ಯುರಿಟಿ ಆಫೀಸರ್ ಆಗಿ
ಲಸ ನಿರ್ವಹಿಸು ತ್ತಿದ್ದರು. ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಎgಡು ತಿಂಗಳ ಹಿಂದೆ ಆ ಕೆಲಸ ಕೊನೆಗೊಳಿಸಿದ್ದರು. ಆತ್ಮಹತ್ಯೆಗೈಯ್ಯಲು ಕಾರಣವೇನೆಂದು ತಿಳಿದುಬಂದಿಲ್ಲ. ಕಾಸರಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಕಣ್ಣೂರು ನಿವಾಸಿ ಮುರಳೀಧರನ್ ಎಂಬವರ ಪುತ್ರನಾದ ಧನ್‌ರಾಜ್ ಪತ್ನಿ ,ಇಬ್ಬರು ಮಕ್ಕಳ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.






