ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ನಿಕಟಪೂರ್ವ ಅಧ್ಯಕ್ಷ, ಎಸ್. ವಿ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ನಾಳೆ ಸಂಜೆ 4.30 ಕ್ಕೆ ಕಾಸರಗೋಡು ಬೀರಂತಬೈಲಿ ನಲ್ಲಿರುವ ‘ಕನ್ನಡ ಅಧ್ಯಾಪಕ ಭವನ’ದಲ್ಲಿ ನಡೆಯಲಿದೆ.
ನಿವೃತ್ತ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ. ಪುಂಡ ರೀಕಾಕ್ಷ ಆಚಾರ್ಯ ಎಸ್ ವಿ ಭಟ್ ರ ಸಂಸ್ಮರಣೆ ಮಾಡುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಮತ್ತು ಕನ್ನಡ ಪತ್ರಿಕೆಗಳು ಎನ್ನುವ ವಿಷಯದ ಕುರಿತು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮಾತನಾಡುವರು. ಪೆರಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರವೀಣ ಪದ್ಯಾಣ ಕಾಸರಗೋಡಿನಲ್ಲಿ ಕನ್ನಡದ ಸ್ಥಿತಿಗತಿಗಳ ಕುರಿತು ಮಾತನಾಡುವರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ.ಎ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಗೌರವ ಕಾರ್ಯದರ್ಶಿಗಳಾದ ಶೇಖರ ಶೆಟ್ಟಿ ಬಾಯಾರು, ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಉಪಸ್ಥಿತರಿರುವರು.
