ಮಂಜೇಶ್ವರ: ಸಹಕಾರ ಭಾರತಿ ಮಂಜೇಶ್ವರ ತಾಲೂಕು ಸಮಿತಿಯ ವಾರ್ಷಿಕ ಸಮ್ಮೇಳನ ಬಾಯಾರು ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ಕೃಷಿ ಇಲಾಖೆಯ ನಿವೃತ್ತ ಉಪ ನಿರ್ದೇಶಕ ತಿರುಮಲೇಶ್ವರ ಭಟ್ ಉದ್ಘಾಟಿಸಿದರು. ಸಹಕಾರ ಭಾರತಿ ಪ್ರಾಂತ್ಯ ಅಧ್ಯಕ್ಷ ನ್ಯಾಯವಾದಿ ಕರುಣಾಕರನ್ ನಂಬ್ಯಾರ್, ಪ್ರಾಂತ್ಯ ಸಮಿತಿ ಸದಸ್ಯ ಐತ್ತಪ್ಪ ಮವ್ವಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಅಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬಾಯಾರು ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಕೂವೆತ್ತೋಡಿ, ಜಿಲ್ಲಾ ಸಂಘಟನಾ ಪ್ರಮುಖ್ ಅಶೋಕ್ ಬಾಡೂರು ಮಾತನಾಡಿದರು. ತಾಲೂಕು ಕಾರ್ಯ ದರ್ಶಿ ಕೃಷ್ಣಮೂರ್ತಿ ನೂಜಿ ಸ್ವಾಗತಿಸಿ, ಬ್ಯಾಂಕ್ ಕಾರ್ಯದರ್ಶಿ ವಿಶ್ವೇಶ್ವರ ಭಟ್ ವಂದಿಸಿದರು.
