ಕಾಸರಗೋಡು: ಬಿಜೆಪಿಯ ಹಿರಿಯ ನಾಯಕಿ ಹಾಗೂ ಕಾಸರಗೋಡು ನಗರಸಭಾ ಕೌನ್ಸಿಲರ್ ಸವಿತಾ ಟೀಚರ್‌ರನ್ನು ಕೇಂದ್ರ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹಿಂದಿ ಸಲಹಾ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಇದಕ್ಕಾಗಿ ಸವಿತಾ ಟೀಚರ್‌ಗೆ ಎಲ್ಲೆಡೆಗಳಿಂದ ಅಭಿನಂದನೆಗಳ ಮಹಾಪೂರಗಳೇ ಹರಿದುಬರತೊಡಗಿವೆ.
