ಕಾಸರಗೋಡು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ಹಾಗೂ ಆಡಳಿತದಲ್ಲಿ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ ಬಿಜೆಪಿ ನಾಯಕರು ಅಂಗನವಾಡಿಗಳಿಗೆ ಭೇಟಿ ನೀಡಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಮತ್ತು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರ ನೇತೃತ್ವದಲ್ಲಿ ಮಧೂರು ಪಂಚಾಯತು ವ್ಯಾಪ್ತಿಯ ದೀನ್ ದಯಾಳ್ ಉಪಾಧ್ಯಾಯ ಬಡ್ಸ್ ಶಾಲೆ ಹಾಗೂ ವಿವಿಧ ಅಂಗನವಾಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಣ್ಣು ವಿತರಿಸಲಾಯಿತು.
ಜಿಲ್ಲಾ ಕಾರ್ಯದರ್ಶಿಗಳಾದ ಪ್ರಮೀಳಾ ಮಜಲ್, ಪುಷ್ಪಾ ಗೋಪಾಲನ್, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ್ ಕುದ್ರೆಪಾಡಿ, ಮಧೂರು ಪಂ. ಅಧ್ಯಕ್ಷೆ ಸುಜ್ಞಾನಿ ಶ್ಯಾನುಭೋಗ್, ಉಪಾಧ್ಯಕ್ಷ ಭಾನು ಪ್ರಕಾಶ್, ಮಧೂರು ಪಂಚಾಯತು ಜನಪ್ರತಿನಿಧಿಗಳು, ಕಾಸರಗೋಡು ಮಂಡಲ, ಏರಿಯಾ ಪದಾಧಿಕಾರಿಗಳು ಭಾಗವಹಿಸಿದ್ದರು.





