ಕನ್ನೆಪ್ಪಾಡಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ: ಪ್ರಯಾಣಿಕರ ಬಹುಕಾಲದ ಕನಸು ನನಸಿನತ್ತ

ಬದಿಯಡ್ಕ: ಕನ್ನೆಪ್ಪಾಡಿ ಜಂಕ್ಷನ್‌ನಿಂದ ಮುಂಡಿತ್ತಡ್ಕ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್‌ಗಾಗಿ ಕಾಯಲು ಸರಿಯಾದ ನಿಲ್ದಾಣವಿಲ್ಲದೆ ಮಳೆ, ಬಿಸಿಲಿಗೆ ರಸ್ತೆ ಬದಿಯಲ್ಲೇ ಅಂಗಡಿ ಮುಂಭಾಗದಲ್ಲಿ ಕಾಯಬೇಕಾದ ಅನಿವಾರ್ಯತೆ ಇದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರು ಇದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲೊಂದು ಬಸ್ ತಂಗುದಾಣ ನಿರ್ಮಿಸಬೇಕೆಂಬ ಸ್ಥಳೀಯರ ಬೇಡಿಕೆಗೆ ವರ್ಷಗಳ ಹಳಮೆ ಇದೆ. ಈ ಹಿನ್ನೆಲೆಯಲ್ಲಿ ಕನ್ನೆಪ್ಪಾಡಿಯಲ್ಲಿ ನೂತನ ಬಸ್ ತಂಗುದಾಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಬದಿಯಡ್ಕ ಪಂಚಾಯತ್ ಆಡಳಿತ ಮಂಡಳಿ ಸ್ಥಳ ಪರಿಶೀಲನೆ ನಡೆಸಿತು. ಪ್ರಯಾಣಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ತಂಗುದಾಣ ನಿರ್ಮಿಸಲು ಸ್ಥಳವನ್ನು ಪಂಚಾಯತ್ ಪದಾಧಿಕಾರಿಗಳು, ಸಾರಿಗೆ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿದರು.

ತಂಡದಲ್ಲಿ ಪಂಚಾಯತ್ ಅಧ್ಯಕ್ಷ ಶಂಕರ ಡಿ, ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಜನಿ ಜಿ.ಆರ್, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅವಿನಾಶ್ ರೈ, ಸದಸ್ಯ ಶ್ಯಾಮ್ ಪ್ರಸಾದ್ ಸರಳಿ,  ಕಾರ್ಯದರ್ಶಿ ಮನೋಜ್ ಕುಮಾರ್, ಶ್ಯಾಮ್ ಪ್ರಸಾದ್ ಮಾನ್ಯ, ಆರ್‌ಟಿಒ ಅಧಿಕಾರಿಗಳು, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು, ಆಟೋ ಚಾಲಕರು, ಸ್ಥಳೀಯರು ಉಪಸ್ಥಿತರಿದ್ದರು.

You cannot copy contents of this page