ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

ಉಪ್ಪಳ: ಸ್ನೇಹಿತರೊಂದಿಗೆ  ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ ಮಂಗಲ್ಪಾಡಿ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ಸಂಜೆ ೫ ಗಂಟೆಗೆ ಘಟನೆ ಸಂಭವಿಸಿದೆ. ಪೆರಿಂಗಡಿ ಮಸೀದಿಯ ಕೆರೆಯಲ್ಲಿ  ಸ್ನೇಹಿತರೊಂ ದಿಗೆ ಸ್ನಾನ ಮಾಡುತ್ತಿದ್ದಾಗ ಅಬೂಬಕರ್ ಅಸಾನ್ ನೀರಿನಲ್ಲಿ ಮುಳುಗಿದ್ದಾನೆನ್ನಲಾ ಗಿದೆ. ಜತೆಗಿದ್ದವರು ಸ್ನಾನ ಮಾಡಿ ಮನೆಗೆ ತೆರಳಲು ಸಿದ್ಧತೆಯಲ್ಲಿದ್ದಾಗ ಅಬೂಬಕರ್ ಅಸಾನ್ ನಾಪತ್ತೆಯಾಗಿ ದ್ದನು. ಜತೆಗಿದ್ದವರು ಹುಡುಕಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸಮೀಪದ ಸಿಸಿ ಟಿವಿ ಕ್ಯಾಮರಾ ದೃಶ್ಯಗಳನ್ನು ನೋಡಿದಾಗ ಬಾಲಕ ನೀರಿನಲ್ಲಿ ಮುಳುಗುತ್ತಿರುವುದು ಕಂಡುಬಂದಿದೆ. ಅನಂತರ ನಾಗರಿಕರು ಹಾಗೂ ಉಪ್ಪಳದಿಂದ ತಲುಪಿದ ಅಗ್ನಿಶಾಮಕದಳ ಕೆರೆಯಲ್ಲಿ ಶೋಧ ನಡೆಸಿದ್ದಾರೆ. ರಾತ್ರಿ 10 ಗಂಟೆಗೆ ಬಾಲಕನನ್ನು ಪತ್ತೆಹಚ್ಚಿ ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ  ರಕ್ಷಿಸಲಾಗಲಿಲ್ಲ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ತಲುಪಿಸಲಾಗಿದೆ. ಘಟನೆ ಬಗ್ಗೆ ಮಂಜೇಶ್ವರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತನು ತಂದೆ, ತಾಯಿ, ಸಹೋದರಿ ಅಲ್ಪ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾನೆ.

RELATED NEWS

You cannot copy contents of this page