ಕಾಸರಗೋಡು: ಆಧುನಿಕ ಚಿಕಿತ್ಸಾ ಸೌಲಭ್ಯಗಳ ಕೊರತೆಯಿಂದ ಕಾಸರಗೋಡು ಜನರಲ್ ಆಸ್ಪತ್ರೆ ಕೇವಲ ನಾಮಕಾವಸ್ಥೆ ಆಸ್ಪತ್ರೆಯಾಗಿ ಮಾರ್ಪಟ್ಟಿದೆ. ಆಸ್ಪತ್ರೆಗೆ ‘ಮೆಡಿಕಲ್ ಕಾಲೇಜು ಆಸ್ಪತ್ರೆ’ ಎಂಬ ಬೋರ್ಡ್ ಅಳವಡಿಸಿದ್ದನ್ನು ಬಿಟ್ಟರೆ ಬೇರೆ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು.
ಜನರಲ್ ಆಸ್ಪತ್ರೆಯ ಶೋಚನೀಯ ಸ್ಥಿತಿಯನ್ನು ಸರಿಪಡಿಸುವುದು, ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸುವುದು, ಹೊಸ ಸ್ಪೆಷಾಲಿಟಿ ವಿಭಾಗಗಳನ್ನು ಪ್ರಾರಂಭಿಸುವುದು, ಸ್ಪೆಷಾಲಿಟಿ ವೈದ್ಯರು ಹಾಗೂ ಪಾರಾಮೆಡಿಕಲ್ ಸಿಬ್ಬಂದಿಯನ್ನು ನೇಮಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊAಡು ಬಿಜೆಪಿ ಕಾಸರಗೋಡು ಮಂಡಲ ಸಮಿತಿಯು ಜನರಲ್ ಆಸ್ಪತ್ರೆಯ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಸಂಜೆ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಈ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಧೈರ್ಯವಿದೆಯೇ ಎಂದು ಅಶ್ವಿನಿ ಪ್ರಶ್ನಿಸಿದರು. ಆಸ್ಪತ್ರೆಯ ದುಸ್ಥಿತಿ ಮತ್ತು ನಿರಂತರವಾಗಿ ಕೇಳಿಬರುತ್ತಿರುವ ಚಿಕಿತ್ಸಾ ಲೋಪಗಳ ದೂರುಗಳಿಂದಾಗಿ ಬಡ ಕುಟುಂಬಗಳು ಕೂಡ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ದಶಕಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮುಸ್ಲಿಂ ಲೀಗ್ ಈ ದುಸ್ಥಿತಿಯ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದೂ ಅವರು ಹೇಳಿದರು.
ಸ್ವಯಂಸೇವಾ ಸಂಸ್ಥೆಗಳು ಕೊಡುಗೆಯಾಗಿ ನೀಡಿದ ಆಮ್ಲಜನಕ ಪ್ಲಾಂಟ್‌ನAತಹ ಸೌಲಭ್ಯಗಳನ್ನು ಕೂಡಾ ಸರಿಯಾಗಿ ಬಳಸಿಕೊಳ್ಳಲು ಸಂಬAಧಪಟ್ಟ ಅಧಿಕಾರಿಗಳು ಮುಂದಾಗುತ್ತಿಲ್ಲ. ಆಸ್ಪತ್ರೆಯ ಸಮಸ್ಯೆಗಳನ್ನು ಪರಿಹರಿಸಲು ತುರ್ತು ಕ್ರಮ ಕೈಗೊಳ್ಳದಿದ್ದಲ್ಲಿ ಜನರಲ್ ಆಸ್ಪತ್ರೆಗೆ ಹಾಗೂ ಇತರ ಆಡಳಿತ ಕಚೇರಿಗಳಿಗೆ ಮುತ್ತಿಗೆ ಸೇರಿದಂತೆ ತೀವ್ರ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅಶ್ವಿನಿ ಎಚ್ಚರಿಕೆ ನೀಡಿದರು.
ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಖಜಾಂಚಿ ವೀಣಾ ಅರುಣ್ ಶೆಟ್ಟಿ, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ್ ಕುದ್ರೆಪ್ಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಿವ್ಯಾ ಸಂದೀಪ್, ರವೀಂದ್ರ ರೈ, ಮಂಡಲ ಉಪಾಧ್ಯಕ್ಷ ಅರುಣ್‌ಕುಮಾರ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಲೀಲಾವತಿ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯ್ಕ್, ಮಂಡಲ ಖಜಾಂಚಿ ಹರೀಶ್ ಕೆ.ಆರ್., ಪುರಸಭೆ, ಮಧೂರು, ಮೊಗ್ರಾಲ್ ಪುತ್ತೂರು ಪಂಚಾಯತ್, ಏರಿಯಾ ಸಮಿತಿ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.






