ಕುಂಬಳೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ತಾತ್ಕಾಲಿಕ ಟೋಲ್ ಬೂತ್ ನಿರ್ಮಾಣ ವಿಷಯದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡುತ್ತಿಲ್ಲವೆಂಬ ಎಸ್‌ಡಿಪಿಐಯ ಹೇಳಿಕೆ ಸುಳ್ಳು ಎಂದು ಬಿಜೆಪಿ ಕುಂಬಳೆ ಮಂಡಲ ಸಮಿತಿ ಆರೋಪಿಸಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆರಂಭವಾದಾಗಿನಿಂದ ಜನರಿಗೆ ಅಗತ್ಯವಿರುವ ಕಡೆಗಳಲ್ಲಿ ಬಿಜೆಪಿ ಮಧ್ಯಪ್ರವೇಶಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಸಂಸದ ಹಾಗೂ ಶಾಸಕರಿಗಿಂತ ಬಿಜೆಪಿ ಜಿಲ್ಲಾಧ್ಯಕ್ಷರು ಹೆಚ್ಚು ಮಧ್ಯಪ್ರವೇಶಿಸಿದ್ದಾರೆಂಬುದಕ್ಕೆ ಪುರಾವೆಗಳಿವೆ. ಟೋಲ್ ಸಮಸ್ಯೆಯ ಕುರಿತು ಕೇಂದ್ರ ಸಾರಿಗೆ ಸಚಿವರಿಗೆ ವರದಿ ಸಲ್ಲಿಕೆ ಸೇರಿದಂತೆ ವಿವಿಧ ಚಟುವಟಿಕೆಗಳೊಂದಿಗೆ ಬಿಜೆಪಿ ಕುಂಬಳೆ ಮಂಡಲ ಸಮಿತಿ ಮುಂದುವರಿಯುತ್ತಿದೆ. ಶೀಘ್ರದಲ್ಲೇ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಮುಖತಃ ಭೇಟಿಮಾಡಿ ಟೋಲ್ ಬೂತ್ ಸಂಬಂಧಿಸಿದ ಸಮಸ್ಯೆಗಳನ್ನು ವಿವರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆದರೆ ಎಸ್‌ಡಿಪಿಐ ಸುಳ್ಳು ಹೇಳಿಕೆಗಳ ಮೂಲಕ ಜನಸಾಮಾನ್ಯರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಪ್ರಕಟಣೆಂiiಲ್ಲಿ ತಿಳಿಸಿದೆ.
