ಕಾರು-ಬೈಕ್ ಢಿಕ್ಕಿ ಇಬ್ಬರಿಗೆ ಗಾಯ

ಉಪ್ಪಳ: ಹೊಸಂಗಡಿ ಸರ್ವೀಸ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖ ಲಿಸಲಾಗಿದೆ. ನಿನ್ನೆ ರಾತ್ರಿ 11.45 ರ ವೇಳೆ ಅಪಘಾತವುಂಟಾಗಿದೆ.

ಹೊಸಂಗಡಿ ಭಾಗದಿಂದ ತಲಪಾಡಿಯತ್ತ ತೆರಳುತ್ತಿದ್ದ ಕಾರು ಹಾಗೂ ಎದುರು ಭಾಗದಿಂದ ಬರುತ್ತಿದ್ದ ಬೈಕ್ ಪರಸ್ಪರ ಢಿಕ್ಕಿ ಹೊಡೆದು ಅಪಘಾತವುಂಟಾಗಿದೆ. ಗಾಯಗೊಂಡವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆಯೆಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.

You cannot copy contents of this page