ಕಾಸರಗೋಡು: ನೇಶನಲ್ ವಿಶ್ವಕರ್ಮ ಫೆಡರೇಶನ್ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕರಂದಕ್ಕಾಡ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ವಿಶ್ವಕರ್ಮ ದಿನಾಚರಣೆ ಹಾಗೂ ವಿಶೇಷ ಪೂಜೆ ನಡೆಯಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಅಧ್ಯಕ್ಷ ಸೀತಾರಾಮ ಆಚಾರ್ಯ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ ಸಿ.ಕೆ. ಅಂಬಿ ಅಧ್ಯಕ್ಷತೆ ವಹಿಸಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವನ್ ಕೊಳತ್ತೂರು, ರಾಜನ್ ಮನ್ನಿಪ್ಪಾಡಿ, ಓಮನ ಅಂಬಿ, ಎ.ಕೆ. ರಾಮಕೃಷ್ಣನ್, ವಿನಿತಾ ನೀರ್ಚಾಲ್ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ನಿಶಾಚಂದ್ರನ್ ಸ್ವಾಗತಿಸಿ, ಕೋಶಾಧಿಕಾರಿ ವಿಷ್ಣು ಆಚಾರ್ಯ ವಂದಿಸಿದರು.ವಿಶ್ವಕರ್ಮ ದಿನದಂದು ಸಾರ್ವತ್ರಿಕ ರಜೆ ಘೋಷಿಸಬೇಕೆಂದು ಸಭೆ ಅಧಿಕಾರಿಗಳಲ್ಲಿ ಆಗ್ರಹಿಸಿದೆ.





