ಕಾರಿನಲ್ಲಿ ತ್ಯಾಜ್ಯ ತಂದು ರಸ್ತೆ ಬದಿ ಉಪೇಕ್ಷೆ

ಕುಂಬಳೆ:   ಗೋಣಿ ಚೀಲಗಳಲ್ಲಿ ತುಂಬಿಸಿದ್ದ ತ್ಯಾಜ್ಯವನ್ನು ಕಾರಿನಲ್ಲಿ ತಂದು ರಸ್ತೆಬದಿ ಎಸೆಯುತ್ತಿರುವುದು ಪತ್ತೆಯಾಗಿದೆ. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.  ನಿನ್ನೆ ಬೆಳಿಗ್ಗೆ ನಾಯ್ಕಾಪಿನಲ್ಲಿ ತ್ಯಾಜ್ಯ ಎಸೆಯಲಾಗಿದೆ. ಕಾರಿನಲ್ಲಿ ಬಂದ ವ್ಯಕ್ತಿ ರಸ್ತೆ ಬದಿ ಕಾರು ನಿಲ್ಲಿಸಿ  ಮೂರು ಗೋಣಿ ಚೀಲಗಳಲ್ಲಿ ತುಂಬಿಸಿಟ್ಟಿದ್ದ ತ್ಯಾಜ್ಯವನ್ನು ರಸ್ತೆ ಬದಿ ಎಸೆದಿದ್ದಾನೆ. ಈ ದೃಶ್ಯ   ಈ ಪರಿಸರದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ನಾಗರಿಕರು ಸಂಗ್ರಹಿಸಿ ಪಂಚಾಯತ್ ಅಧಿಕಾರಿಗಳಿಗೆ ನೀಡಿದ್ದಾರೆ. ಇದರಂತೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

You cannot copy contents of this page