ಬದಿಯಡ್ಕ: ಬದಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಎಸೆಯುವ ಆಯ್ದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಆಡಳಿತ ಸಮಿತಿ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳು ಹಾಗೂ ರಸ್ತೆ ಬದಿಗಳಲ್ಲಿ ಉಪಯೋಗಶೂನ್ಯ ವಸ್ತುಗಳು ಮತ್ತು ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚೆಲ್ಲುವ ಸ್ಥಳಗಳನ್ನು ಗುರುತಿಸಿ, ಕ್ಯಾಮೆರಾ ಸ್ಥಾಪಿಸಲು ಪಂ. ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪಂ. ಅಧ್ಯಕ್ಷ ಡಿ. ಶಂಕರ ಅವರ ನೇತೃತ್ವದಲ್ಲಿ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜನಪ್ರತಿನಿಗಳಾದ ಶ್ಯಾಮಪ್ರಸಾದ್ ಸರಳಿ, ಅನ್ನತ್ ಬೀವಿ, ಬಿಂದ್ಯಾ ಎಂ., ಶ್ಯಾಮಪ್ರಸಾದ್ ಮಾನ್ಯ ಹಾಗೂ ಆರೋಗ್ಯ ಇಲಾಖೆಯ ಬಾಬುರಾಜ್ ಉಪಸ್ಥಿತರಿದ್ದರು.





