ರಸ್ತೆ ದಾಟುತ್ತಿದ್ದ ಮಹಿಳೆ ಬಸ್ ಢಿಕ್ಕಿ ಹೊಡೆದು ಮೃತ್ಯು

ಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಣ್ಣೂರು ವಾಣಿಯಂಬಾರೆ ನಿವಾಸಿ ಸರಸ್ವತಿ (75) ಸಾವನ್ನಪ್ಪಿದ ಮಹಿಳೆ. ಇವರು ನಿನ್ನೆ ಪಾಲಕುನ್ನು ಬಳಿ ರಸ್ತೆ ದಾಟುತ್ತಿದ್ದ ವೇಳೆ ಆ ದಾರಿಯಾಗಿ ಕಾಸರಗೋಡು ಭಾಗದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದು ಬಸ್‌ನ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತಾದರೂ ಅದು ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಬೇಕಲ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

RELATED NEWS

You cannot copy contents of this page