ಮನೆಯೊಳಗೆ ಮಹಿಳೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕುಂಬಳೆ: ಕಳತ್ತೂರಿನಲ್ಲಿ ಮಹಿಳೆಯೊಬ್ಬರು ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳತ್ತೂರು ಅಮೆರಿಕ ರೋಡ್‌ನ ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಮೃತಪಟ್ಟವರಾಗಿದ್ದಾರೆ.   ಸಿಮೆಂಟ್‌ನ ಶೀಟ್ ಹೊದಿಸಿದ ಪುಟ್ಟ ಮನೆಯಲ್ಲಿ ಆಮಿನ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಮನೆಯೊಳಗಿನಿಂದ ದುರ್ನಾತ ಬೀರುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು  ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಲುಪಿ ಪರಿಶೀಲಿಸಿದಾಗ ಮೃತದೇಹ ಮನೆಯೊಳಗೆ ಮಂಚದಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ನಾಲ್ಕು ದಿನಗಳ ಹಿಂದೆ ಸಾವು ಸಂಭವಿಸಿರಬಹುದೆಂದು ಅಂದಾಜಿಸಲಾ ಗುತ್ತಿದೆ. ಮನೆಯ ಮುಂಭಾಗ ಹಾಗೂ ಹಿಂಭಾಗದ ಬಾಗಿಲುಗಳು ತೆರೆದಿಟ್ಟ ಸ್ಥಿತಿಯಲ್ಲಿದ್ದವೆಂದು ಪೊಲೀಸರು ತಿಳಿಸಿದ್ದಾರೆ.

ಹೃದಯಾಘಾತದಿಂದ ಸಾವು ಸಂಭವಿಸಿರಬಹುದೆಂದು ಸಂಶಯಿಸಲಾಗುತ್ತಿದೆ. ಮರಣೋತ್ತರ ಪರೀಕ್ಷಾ ವರದಿ ಲಭಿಸಿದ ಬಳಿಕವೇ ಸಾವಿಗೆ ಕಾರಣವೇನೆಂದು ಖಚಿತಪಡಿ ಸಲು ಸಾಧ್ಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಮಕ್ಕಳಾದ ಮುಬೀನ, ಬುಶ್ರಾ, ಹಮೀದ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

You cannot copy contents of this page