ಇಲಿವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತ್ಯು

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡ್ಲು ಚೆಟ್ಟುಂಗುಳಿ ಇಝ್ಝತ್‌ನಗರದ ಎಸ್.ಎಂ. ಮಂಜಿಲ್‌ನ ಅಬ್ದುಲ್ ಮನಾಫ್ ಎಂಬವರ ಪುತ್ರಿ ಆಮಿನ ನುಸಾ (18) ಸಾವನ್ನಪ್ಪಿದ ಯುವತಿ. ಜೂನ್ 25ರಂದು ಆಮಿನ ನುಸಾ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಪತ್ತೆಯಾಗಿದ್ದರು. ನಂತರ ಅವರನ್ನು ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಆರೋಗ್ಯ ಸ್ಥಿತಿ ಇನ್ನಷ್ಟು ಬಿಗಡಾಯಿಸಿದಾಗ ಅವರನ್ನು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆ ಯೊಂದಕ್ಕೆ ಸಾಗಿಸಿ ಉನ್ನತ ಮಟ್ಟದ ಚಿಕಿತ್ಸೆ ನೀಡಲಾ ಯಿತಾದರೂ ಅದು ಫಲಕಾರಿ ಯಾಗದೆ ನಿನ್ನೆ ರಾತ್ರಿ ಮೃತಪಟ್ಟಿ ದ್ದಾರೆ. ಕಾಸರಗೋಡು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

You cannot copy contents of this page