ಕುಂಬ್ಡಾಜೆ ಪಂಚಾಯತ್‌ನಲ್ಲಿ ಕಾಂಗ್ರೆಸ್, ಸಿಪಿಎಂ ತ್ಯಜಿಸಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಬದಿಯಡ್ಕ: ಕುಂಬ್ಡಾಜೆ ಪಂಚಾಯತ್‌ನ ವಿವಿಧ ಭಾಗ ಗಳಿಂದ ಸಿಪಿಎಂ ಹಾಗೂ ಕಾಂ ಗ್ರೆಸ್ ಪಕ್ಷಗಳಿಗೆ ರಾಜೀನಾಮೆ ನೀಡಿ ಹಲವರು ಕಾರ್ಯ ಕರ್ತರು ಬಿಜೆಪಿಗೆ ಸೇರ್ಪಡೆ ಗೊಂಡಿರುವು ದಾಗಿ ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ. ಇವರನ್ನು ಏತಡ್ಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪನ್ವೇಲ್ ಶಾಸಕ ಪ್ರಶಾಂತ್ ಠಾಕೂರ್ ಎಂಬಿವರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆಯೂ, ಎನ್‌ಡಿಎ ಅಭ್ಯರ್ಥಿಯಾದ ಅಶ್ವಿನಿ ಎಂ.ಎಲ್. ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು.  ಕೇರಳದಲ್ಲಿ ಭವಿಷ್ಯದಲ್ಲಿ ಉಂಟಾಗಬಹುದಾದ ರಾಜಕೀಯ ಬದಲಾವಣೆಗೆ ಇದು ಉದಾಹರಣೆಯಾಗಿದೆ ಎಂದು ಈ ಸಂದರ್ಭದಲ್ಲಿ ಅಶ್ವಿನಿ ನುಡಿದರು.

ಜಿಲ್ಲಾ ಪಂಚಾಯತ್ ಸದಸ್ಯ ರಾಮಪ್ಪ ಮಂಜೇಶ್ವರ, ಬಿಜೆಪಿ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎನ್, ಬದಿಯಡ್ಕ ಪಂಚಾಯತ್ ಅಧ್ಯಕ್ಷ ಶಂಕರ ಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಮಾತನಾಡಿದರು.

RELATED NEWS

You cannot copy contents of this page