ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಚಿತ್ತಾರಿ ಚೇಟುಕುಂಡ್‌ನಲ್ಲಿ ಯುವಕ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಇಂದು ಮುಂಜಾನೆ ಕಣ್ಣೂರು ಭಾಗಕ್ಕೆ ತೆರಳಿದ ರೈಲಿನ ಲೋಕೊ ಪೈಲೆಟ್ ನೀಡಿದ ಮಾಹಿ ತಿಯ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತಲುಪಿ ಹುಡುಕಾಟ ನಡೆಸಿದರಾದರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಕತ್ತಲೆ ಹಾಗೂ ಮಂಜು ಮುಸುಕಿದ ಕಾರಣ ಹುಡುಕಾಟದಲ್ಲಿ ಆ ವೇಳೆಗೆ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಬಂದು ನಡೆಸಿದ ಹುಡುಕಾಟದಲ್ಲಿ ಮೃತದೇಹವನ್ನು ಪತ್ತೆಹಚ್ಚಲಾಯಿತಾದರೂ ಗುರುತಿಸಲು ಸಾಧ್ಯವಾಗಲಿಲ್ಲ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದ್ದು, ಬೇಕಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.







