ರೈಲು ಢಿಕ್ಕಿ ಹೊಡೆದು ಯುವಕ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್ ಕಚೇರಿ ಬಳಿಯ ಕಲ್ಲಂಗೈ ರೈಲು ಹಳಿಯಲ್ಲಿ ಯುವಕನೋರ್ವನ ಮೃತದೇಹ ರೈಲುಗಾಡಿ ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯ ಜೇಬಿನಲ್ಲಿ ಪಾನ್‌ಕಾರ್ಡ್ ಪತ್ತೆಯಾಗಿದ್ದು, ಅದರಲ್ಲಿ ಅಸ್ಸಾಂನ ಇಮಿಲೋ ಮುರ ಎಂಬ ವಿಳಾಸ ನಮೂದಿಸಲಾ ಗಿದೆ. ಮೃತ ವ್ಯಕ್ತಿಗೆ ಸುಮಾರು 30 ವರ್ಷ ಅಂದಾಜಿಸಲಾಗಿದೆ. ಆತ ಜೀನ್ಸ್ ಪ್ಯಾಂಟ್ ಮತ್ತು ಜಾಕೆಟ್ ಧರಿಸಿದ್ದನು. ಕಾಸರಗೋಡು ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಮೃತ ವ್ಯಕ್ತಿಯ ಸರಿಯಾದ ಗುರುತು ಪತ್ತೆ ಹಚ್ಚಲು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮಲಬಾರ್ ಎಕ್ಸ್‌ಪ್ರೆಸ್ ರೈಲುಗಾಡಿ ಢಿಕ್ಕಿ ಹೊಡೆದು ಈ ವ್ಯಕ್ತಿ ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

You cannot copy contents of this page