ಮುಳ್ಳೇರಿಯ: ಯುವಕನೋರ್ವ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಬೈತ್ಯಡ್ಕ ಉನ್ನತಿಯ ನಿವಾಸಿಯಾದ ಬಾಬು ಎಂಬವರ ಪುತ್ರ ಹರೀಶ್ (22) ಮೃತ ಯುವಕ. ಇವರು ಕೂಲಿ ಕಾರ್ಮಿಕನಾಗಿದ್ದರು. ಮೊನ್ನೆ ರಾತ್ರಿ ಮನೆ ಸಮೀಪದ ಮರದಲ್ಲಿ ಇವರು ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಘಟನೆ ಬಗ್ಗೆ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರೀಶ್‌ರ ತಾಯಿ ಸುಶೀಲ ಮೂರು ತಿಂಗಳ ಹಿಂದೆಯಷ್ಟೇ ಅಸೌಖ್ಯ ಬಾಧಿಸಿ ನಿಧನಹೊಂದಿದ್ದಾರೆ. ಹರೀಶ್ ಆತ್ಮಹತ್ಯೆಗೈಯ್ಯಲು ಕಾರಣವೇನೆಂದು ತಿಳಿದುಬಂದಿಲ್ಲ.
ಮೃತರು ತಂದೆ ಹಾಗೂ ಸಹೋದರ-ಸಹೋದರಿಯರ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.






