ಉಪ್ಪಳ: ಜ್ವರ ಬಾಧಿಸಿ ಮಂಗ ಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟರು. ಕುಂಜತ್ತೂರು ಉದ್ಯಾವರ ನಿವಾಸಿ ಉಮ್ಮರ್ ಫಾರೂಕ್ (26) ಎಂಬವರು ಮೃತಪಟ್ಟ ವ್ಯಕ್ತಿ. ಇವರಿಗೆ ಕಳೆದ ಶನಿವಾರದಿಂದ ಜ್ವರ ಬಾಧಿಸಿತ್ತೆನ್ನ ಲಾಗಿದೆ. ಸ್ಥಳೀಯ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದರೂ ಜ್ವರ ವಾಸಿಯಾಗದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನ ಸಂಭವಿಸಿದೆ. ಉಮ್ಮರ್ ಫಾರೂಕ್ ಹೊಸಂಗಡಿಯ ಮಟನ್‌ಸ್ಟಾಲ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೊಹಮ್ಮದ್-ಬೀಫಾತಿಮ ದಂಪತಿಯ ಪುತ್ರನಾದ ಮೃತರು ಸಹೋದರರಾದ ಹಾಶಿರ್, ಹಸನ್,ಸಹೋದರಿ ಹಸೀನ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.







