ಕಾಸರಗೋಡು: ಕೂಡ್ಲುನಲ್ಲಿ ಯುವತಿಯನ್ನು ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ವೀವರ್ಸ್ ಕಾಲನಿಯ ಅನಿಲ್ ಹೌಸ್ ನಿವಾಸಿ ಸತೀಶ್‌ರ ಪತ್ನಿ ರವೀಣ (30) ಮೃತಪಟ್ಟ ಯುವತಿ. ನಿನ್ನೆ ಸಂಜೆ ರವೀಣ ಸ್ನಾನದ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ತಲುಪಿಸಲಾ ಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಇಂದು ಬೆಳಿಗ್ಗೆ ಜನರಲ್ ಆಸ್ಪತ್ರೆಯಲ್ಲಿ ಮರಣೋ ತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ. ಕಾಸರಗೋಡು ನಗರ ಠಾಣೆ ಪೊಲೀಸರು ಅಸಹಜ ಸಾವಿಗೆ ಕೇಸು ದಾಖಲಿಸಿದ್ದಾರೆ. ಮಾನಸಿಕ ಅಸ್ವಸ್ಥತೆಯೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ. ದಿ| ರವಿ- ಆಶಾ ದಂಪತಿ ಪುತ್ರಿಯಾದ ಮೃತರು ತಾಯಿ, ಪತಿ, ಪುತ್ರ ಪಾಯಿಚ್ಚಾಲ್ ಚೈತನ್ಯ ವಿದ್ಯಾಲಯದ ವಿದ್ಯಾರ್ಥಿಯಾದ ಯಾಶ್, ಸಹೋದರ ಋತ್ವಿಕ್ ರೋಶನ್, ಸಹೋದರಿ ಅಂಜನ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.







