ಯುವತಿ ಹೊಸಮನೆಯ ಬೆಡ್‌ರೂಂನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಮುಳ್ಳೇರಿಯ: ಕಾರಡ್ಕ ಪಂಚಾಯತ್‌ನ ಕರ್ಮಂತೋಡಿ ಮೂಡಾಂಕುಳ ಎಂಬಲ್ಲಿ ಯುವತಿ ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ಸೈನಿಕನಾಗಿರುವ ರಾಜೇಶ್ ಕುಮಾರ್‌ರ ಪತ್ನಿ ಸೌಪರ್ಣಿಕ (40) ಸಾವಿಗೀಡಾದ ಯುವತಿ. ಹೊಸತಾಗಿ ನಿರ್ಮಿಸಿದ ಮನೆಯ ಗೃಹ ಪ್ರವೇಶ ಒಂದು ತಿಂಗಳ ಹಿಂದೆಯಷ್ಟೇ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಬಂದ ರಾಜೇಶ್ ಕುಮಾರ್ ಮರಳಿ ಕೆಲಸ ಸ್ಥಳಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ ಸೌಪರ್ಣಿಕ ಮನೆಯ ಮೇಲಂತಸ್ತಿನ ಬೆಡ್‌ರೂಂನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಮುಳ್ಳೇರಿಯದ ಆಸ್ಪತ್ರೆಗೆ ತಲುಪಿಸಿದರೂ ಅಷ್ಟರೊಳಗೆ ಸಾವು ಸಂಭವಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಮುಳಿಯಾರು ಬಳಿಯ ಪಾತನಡ್ಕ ನಿವಾಸಿಯಾದ ಸೌಪರ್ಣಿಕರಿಗೆ ಇಬ್ಬರು ಮಕ್ಕಳಿದ್ದಾರೆ. ಆದೂರು ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ನಡೆಸಿದ್ದಾರೆ. 

ಮೃತದೇಹದ ಮಹಜರು ನಡೆಸಿದ ಬಳಿಕ  ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದು ರಾಜೇಶ್ ಕುಮಾರ್ ಊರಿಗೆ ಹೊರಟಿದ್ದಾರೆ.

You cannot copy contents of this page