ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿ ನಾಪತ್ತೆ

ಉಪ್ಪಳ: ಅಂಗಡಿಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ತಾಯಿ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿ ದ್ದಾರೆ. ಪೈವಳಿಕೆ ಆಜಾದ್‌ನಗರ ನಿವಾಸಿಯಾದ ಫಾತಿಮತ್ ಮಕ್ನಾಸ್ (19) ನಾಪತ್ತೆಯಾದ ಯುವತಿ. ಈಕೆ ಉಪ್ಪಳದ ವ್ಯಾಪಾರ ಸಂಸ್ಥೆ ಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಳು.ಎಂದಿನಂತೆ ನಿನ್ನೆ ಬೆಳಿಗ್ಗೆ ಮನೆಯಿಂದ ಯುವತಿ ತೆರಳಿದ್ದಳು. ಸಂಜೆ ಮರಳಿ ಮನೆಗೆ ತಲುಪದ ಹಿನ್ನೆಲೆಯಲ್ಲಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

RELATED NEWS

You cannot copy contents of this page